ಕುಕ್ಕೆ ಸುಬ್ರಹ್ಮಣ್ಯದಲ್ಲಿ ಯಾತ್ರಿಕನೋರ್ವನಿಗೆ ಹಲ್ಲೆ ನಡೆಸಿರುವ ಬಗ್ಗೆ ವರದಿಯಾಗಿದ್ದು ಹಲ್ಲೆ ನಡೆಸಲಾಗಿದೆ ಎನ್ನಲಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಬ್ರಹ್ಮಣ್ಯ ಗ್ರಾಮದ ಕಾಶಿಕಟ್ಟಿ ಮಾರ್ಗವಾಗಿ ಆದಿಸುಬ್ರಹ್ಮಣ್ಯ ಕಡೆಗೆ ಹೋಗುವ ರಸ್ತೆಯಲ್ಲಿ ಲಾಡ್ಜ್ ವೊಂದರ ಮುಂಭಾಗ ಯುವಕನೊಬ್ಬನು, ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮತ್ತೊಬ್ಬ ಯುವಕನನ್ನು ತಡೆದು ನಿಲ್ಲಿಸಿ, ಆತನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾ, ಕೈಯಿಂದ ಹಲ್ಲೆ ಮಾಡುತ್ತಿರುವ ವಿಡಿಯೋ ವಾಟ್ಸಾಪ್ ಮೂಲಕ ಕಂಡುಬಂದಿರುತ್ತದೆ.
ಸದ್ರಿ ಯುವಕನಿಗೆ ಹಲ್ಲೆ ಮಾಡಿದ ಆರೋಪಿ ಶಂಕರ್ ಎಂಬಾತನ ವಿರುದ್ಧ ದಿನಾಂಕ 10.06.2025 ರಂದು ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ:31/2025.ಕಲಂ:126(2),115(2),352 ಓಖ ರಂತೆ ಪ್ರಕರಣ ದಾಖಲಾಗಿದ್ದು ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.