ಬಂಟ್ವಾಳ: ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಪತಿಯ ಜತೆ ಪ್ರಯಾಣಿಸುತ್ತಿದ್ದ ಮಹಿಳೆಗೆ ಆರೋಪಿಯೋರ್ವ ದೈಹಿಕ ಕಿರುಕುಳ ನೀಡಿದ ಘಟನೆ ಬಂಟ್ವಾಳ ಬೈಪಾಸ್ ಜಂಕ್ಷನ್‌ನಲ್ಲಿ ನಡೆದಿದೆ.
ಅಬೂಬಕ್ಕರ್ ಮಹಿಳೆಗೆ ಕಿರುಕುಳ ನೀಡಿದ ಆರೋಪಿ. ಉಜಿರೆಯಿಂದ ಮಂಗಳೂರಿನತ್ತ ಪ್ರಯಾಣಿಸುತ್ತಿದ್ದ ಮಹಿಳೆಯ ಜತೆ ಆತ ಅಸಭ್ಯವಾಗಿ ವರ್ತಿಸಿದಲ್ಲದೇ ದೈಹಿಕ ಕಿರುಕುಳ ನೀಡಿದ್ದಾನೆ. ಸಂತ್ರಸ್ತ ಮಹಿಳೆ ನೀಡಿದ ದೂರಿನಂತೆ ಬಂಟ್ವಾಳ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.