ವಿಟ್ಲ: ಚಾಲಕನ ನಿಯಂತ್ರಣ ಕಳೆದುಕೊಂಡು ಯಂತ್ರ ಸಾಗಾಟ ಮಾಡುತ್ತಿದ್ದ ಲಾರಿಯೊಂದು ರಸ್ತೆ ಬದಿಯ ಹೊಂಡಕ್ಕೆ ಉರುಳಿ ಬಿದ್ದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪ ನಡೆದಿದೆ.
ಉಪ್ಪಿನಂಗಡಿ ಕಡೆಯಿಂದ ಮಂಗಳೂರಿನ ಬೈಕಂಪಾಡಿಗೆ ಸಿಮೆಂಟ್ ಮಿಕ್ಸರ್ ಯಂತ್ರವನ್ನು ಸಾಗಾಟ ಮಾಡುತ್ತಿದ್ದ ಲಾರಿ ಮಾಣಿ ಸಮೀಪ ಚಾಲಕನ ನಿಯಂತ್ರಣ ಕಳೆದು ರಸ್ತೆ ಬದಿಯ ಹೊಂಡಕ್ಕೆ ಉರುಳಿ ಬಿದ್ದಿದೆ. ಮುಂಭಾಗದಿಂದ ತೆರಳುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ಭರದಲ್ಲಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಘಟನೆಯಲ್ಲಿ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಲಾರಿ ಹಾಗೂ ಯಂತ್ರ ಸಂಪೂರ್ಣವಾಗಿ ಹಾನಿಗೊಂಡಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದಾರೆ.