ಪುತ್ತೂರು: ಕಾರು ಮತ್ತು ಬೈಕ್ ಡಿಕ್ಕಿಯಾದ ಘಟನೆ ನೆಹರುನಗರದಲ್ಲಿ ನಡೆದಿದೆ.
ಘಟನೆ ಪರಿಣಾಮ ಬೈಕ್ ಸವಾರ ಮುರ ನಿವಾಸಿ ತನ್ಸೀರ್ ಗೆ ಗಂಭೀರ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.