ಪುತ್ತೂರಿನ ಆನೆಮಜಲು ಪರಿಸರದಲ್ಲಿ ಕ್ರೈಸ್ತ ದಫನ್ ಭೂಮಿಯಲ್ಲಿ ಯಾರೋ ದುಷ್ಕರ್ಮಿಗಳು ಸಮಾಧಿಯೊಂದನ್ನು ಒಡೆದು ಹಾಕಿರುವ ಘಟನೆ ನಡೆದಿದೆ.
ಫಾ: ಬಾಲ್ತಿಜಾರ್ ಪಿಂಟೋ, ಧರ್ಮ ಗುರುಗಳು, ಸಂತ ಅಂತೋಣಿ ಚರ್ಚ್, ಬನ್ನೂರು ಎಂಬವರ ನೀಡಿದ ದೂರಿನ ಮೇರೆಗೆ ಪೊಲೀಸರು ತನಿಕೆ ನಡೆಸುತ್ತಿದ್ದಾರೆ.
ದಿನಾಂಕ: 14.06.2025 ರಂದು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಮೇರೆಗೆ, ದೂರರ್ಜಿಯನ್ನು ದಾಖಲಿಸಿಕೊಂಡಿದ್ದು, ಘಟನಾ ಸ್ಥಳಕ್ಕೆ ಪುತ್ತೂರು ನಗರ ಠಾಣಾ ಪೊಲೀಸ್ ನಿರೀಕ್ಷಕರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸದ್ರಿ ಕೃತ್ಯವನ್ನು ನಡೆಸಿದ ದುಷ್ಕರ್ಮಿಗಳ ಪತ್ತೆಗಾಗಿ ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.