ಪುತ್ತೂರು : ಧರ್ಮಸ್ಥಳ ಗ್ರಾಮದಲ್ಲಿ ನಡೆದ ಅಪರಾಧ ಕೃತ್ಯಗಳ ಮೃತದೇಹವನ್ನು ರಹಸ್ಯವಾಗಿ ವಿಲೇವಾರಿ ಮಾಡಿದ್ದು ಅಪರಾಧ ಕೃತ್ಯಗಳನ್ನು ನಡೆಸಿದವರ ಸಂಪೂರ್ಣ ಮಾಹಿತಿಯನ್ನು ಹಾಗೂ ತಾನು ಮೃತದೇಹಗಳನ್ನು ವಿಲೇವಾರಿ ಮಾಡಿದ ಸ್ಥಳಗಳನ್ನು ಪೊಲೀಸರಿಗೆ ತೋರಿಸಲು ತಾನು ಸಿದ್ದವಿರುವುದಾಗಿ ವ್ಯಕ್ತಿಯೋರ್ವ ನೀಡಿದ ದೂರಿನ ಅನ್ವಯ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಸ್ತುತ ದೂರುದಾರರಿಗೆ ಪಾಪಪ್ರಜ್ಞೆ ಕಾಡುತ್ತಿರುವುದರಿಂದ, ತನಗೆ ಹಾಗೂ ತನ್ನ ಕುಟುಂಬಕ್ಕೆ ಕಾನೂನಾತ್ಮಕವಾಗಿ ರಕ್ಷಣೆ ದೊರೆತ ಕೂಡಲೇ, ಸದ್ರಿ ಅಪರಾಧ ಕೃತ್ಯಗಳನ್ನು ನಡೆಸಿದವರ ಸಂಪೂರ್ಣ ಮಾಹಿತಿಯನ್ನು ಹಾಗೂ ತಾನು ಮೃತದೇಹಗಳನ್ನು ವಿಲೇವಾರಿ ಮಾಡಿದ ಸ್ಥಳಗಳನ್ನು ಪೊಲೀಸರಿಗೆ ತೋರಿಸಲು ತಾನು ಸಿದ್ದವಿರುವುದಾಗಿ ಪೊಲೀಸ್ ಅಧೀಕ್ಷಕರ ಕಛೇರಿಗೆ ಹಾಗೂ ಧರ್ಮಸ್ಥಳ ಪೊಲೀಸ್ ಠಾಣೆಗೆ ವ್ಯಕ್ತಿಯಿಂದ ದೂರು ಸಲ್ಲಿಕೆಯಾಗಿರುತ್ತದೆ.
ಈ ದೂರಿನ ಬಗ್ಗೆ ನ್ಯಾಯಾಲಯದಿಂದ ಅಗತ್ಯ ಅನುಮತಿಯನ್ನು ಪಡೆದುಕೊಂಡು, ಶುಕ್ರವಾರ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ: 39/2025, ಕಲಂ: 211(a) ಬಿ ಎನ್ ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ದೂರುದಾರರು ದೂರಿನಲ್ಲಿ ತನ್ನ ಹೆಸರು ಮತ್ತು ಮಾಹಿತಿಯನ್ನು ಗೌಪ್ಯವಾಗಿ ಇಡುವಂತೆ ವಿನಂತಿಸಿಕೊಂಡ ಮೇರೆಗೆ, ದೂರುದಾರರ ಮಾಹಿತಿಯನ್ನು ಪೊಲೀಸ್ ಮೂಲಗಳಿಂದ ನೀಡಲಾಗಿಲ್ಲ