ಪುತ್ತೂರು : ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ, ಆಕೆ ಗರ್ಭವತಿಯಾದ ಬಳಿಕ ವಿವಾಹವಾಗಲು ನಿರಾಕರಿಸಿ ಕಳೆದ ಹತ್ತು ದಿನಗಳಿಂದ ನಾಪತ್ತೆಯಾಗಿದ್ದ ಆರೋಪಿ ಕೃಷ್ಣ ಜೆ. ರಾವ್ (21) ನನ್ನು
ಪೊಲೀಸರು ಬಂಧಿಸಿದ ಬೆನ್ನಲ್ಲೇ ಪರಾರಿಯಾಗಲು ಸಹಕರಿಸಿದ ಆರೋಪದಡಿ ಆರೋಪಿಯ ತಂದೆ ಬಿಜೆಪಿ ಮುಖಂಡ ಪಿ.ಜಿ.ಜಗನ್ನಿವಾಸ್ ನನ್ನು ಬಂಧಿಸಲಾಗಿದೆ.
ಆರೋಪಿ ನಾಪತ್ತೆ ಆದ ನಂತರ ಆತನಿಗೆ ಆಶ್ರಯ ನೀಡಿದ್ದ ಸಂಬಂಧಿಕರನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದು ಆ ವೇಳೆ ಆರೋಪಿಯ ಸುಳಿವು ಪತ್ತೆಯಾಗಿತ್ತು ಎನ್ನಲಾಗಿದೆ. ಆರೋಪಿ ತಪ್ಪಿಸಿಕೊಂಡ ನಂತರ ಆತನ ಸುಳಿವು ಸಿಗದಂತೆ ಜಗನ್ನಿವಾಸ ರಾವ್ ಮಾಡಿದ್ದ ಎನ್ನಲಾಗಿದೆ.