ಹಾಸನ: ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಹಾಸನ ಹೊರವಲಯದ ಕೆಂಚಟ್ಟಹಳ್ಳಿ ಬಳಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಕುತ್ರಬೆಟ್ಟು ಮನೆಯ ದಿ.ಗಣಪ ಗೌಡರ ಮಕ್ಕಳಾದ ಅಣ್ಣ ಜಯಪ್ರಕಾಶ್(25) , ತಮ್ಮ ಯೋಗಿಶ್(23) ಸಾವನ್ನಪ್ಪಿದವರು. ಇನ್ನುಳಿದ ಇಬ್ಬರ ಗುರುತು ಪತ್ತೆಯಾಗಿಲ್ಲ. ಹೀಗಾಗಿ ಪೊಲೀಸರು ಗುರುತನ್ನು ಪತ್ತೆ ಹಚ್ಚುವ ಕೆಲಸಕ್ಕೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಗಾಯಾಳುವನ್ನು ಜಿಲ್ಲಾ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.