ಕಡಬ: ಸಹೋದರರ ನಡುವೆ ಜಗಳ ನಡೆದು ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಅಲಂಪಾಡಿ ಎಂಬಲ್ಲಿ ನಡೆದಿದೆ.
ಕಡಬ ಕೌಕ್ರಾಡಿ ನಿವಾಸಿ ರಾಜಶೇಖರ್ ಹಲ್ಲೆಗೊಳಗಾದ ವ್ಯಕ್ತಿ. ಅವರು ನೀಡಿದ ದೂರಿನ ಮೇರೆಗೆ ಸಹೋದರರಾದ ಮನೋಜ್ ಕುಮಾರ್ ಮತ್ತು ಜಯರಾಜ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ.
ರಾಜಶೇಖರ್ ರವರು ಮನೆಯಲ್ಲಿದ್ದಾಗ ಸಹೋದರ ಮನೋಜ್ ಕುಮಾರ್ ಅಲ್ಲಿಗೆ ಬಂದು ಅವಾಚ್ಯ ಶಬ್ದಗಳಿಂದ ಬೈಯ್ಯುತ್ತಿದ್ದಾಗ ಇನ್ನೊಬ್ಬ ಸಹೋದರ ಜಯರಾಜ್ ಕತ್ತಿಯಿಂದ ಹಲ್ಲೆ ಮಾಡಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಅಕ್ರ: 63/2025 ಕಲಂ: 352, 118(1) ಜೊತೆಗೆ 3(5) BNS ರಂತೆ ಪ್ರಕರಣ ದಾಖಲಾಗಿದೆ.