ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸೌತಡ್ಕದ ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಅವರ ಮನೆಗೆ ಭೇಟಿ ನೀಡಿದ ಸುಳ್ಯ ಶಾಸಕರಾದ ಕು. ಭಾಗೀರಥಿ ಮುರುಳ್ಯ ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿದರು.
ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರೊಂದಿಗೆ ಸಮಾಲೋಚಿಸಿ, ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರವನ್ನು ಒದಗಿಸುವ ಬಗ್ಗೆ ಅರಣ್ಯ ಸಚಿವರಾದ ಮಾನ್ಯ ಈಶ್ವರ ಖಂಡ್ರೆಯವರ ಮೂಲಕ ಸರ್ಕಾರಕ್ಕೆ ಒತ್ತಾಯಿಸಿದರು ಹಾಗೂ ಕುಟುಂಬದ ಸದಸ್ಯರೋರ್ವರಿಗೆ ಸರಕಾರಿ ಉದ್ಯೋಗ ನೀಡುವಂತೆ ಮನವಿ ಮಾಡಿದರು.
ಅರಣ್ಯ ಇಲಾಖೆಯ ವತಿಯಿಂದ ಪರಿಹಾರ ಸೌಲಭ್ಯಗಳನ್ನು ತುರ್ತಾಗಿ ಒದಗಿಸುವಂತೆ ಜಿಲ್ಲಾ ಅರಣ್ಯ ಅಧಿಕಾರಿಯವರಿಗೆ ಅಗ್ರಹಿಸಿದರು.
ಆನೆ ದಾಳಿ ಘಟನೆ ಸುಳ್ಯ ವಿಧಾನಸಭಾ ಕ್ಷೇತ್ರದ ಕೌಕ್ರಾಡಿ ಗ್ರಾಮದ ಗುಂಡಿ ಎಂಬ ಪ್ರದೇಶದಲ್ಲಿ ನಡೆದಿದ್ದು ಅಲ್ಲಿಗೆ ಬೇಟಿ ನೀಡಿದ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ರಾಕೇಶ್ ರೈ ಕೆಡೆಂಜಿ , ನೆಲ್ಯಾಡಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ರವಿಪ್ರಸಾದ್ ಶೆಟ್ಟಿ ಬೆಳ್ತಂಗಡಿ ತಾಲೂಕಿನ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ, ಹಾಗೂ ವಿಶ್ವಹಿಂದು ಪರಿಷತ್ ನ ಮುಖಂಡರಾದ ನವೀನ್ ನೆರಿಯ ಹಾಗೂ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.