ಪುತ್ತೂರು: ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಹೆಡ್ ಕಾನ್‌ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪುತ್ತೂರಿನ ವಿಶ್ವನಾಥ ನಾಯ್ಕ್ ರವರು ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ ಹೊಂದಿ ಸುಳ್ಯ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡು ಕರ್ತವ್ಯಕ್ಕೆ ಹಾಜರಾಗಿದ್ದಾರೆ.
ಬೆಳ್ತಂಗಡಿ ತಾಲೂಕಿನ ಕಣಿಯಾರು ಗ್ರಾಮದ ತನಿಯಪ್ಪ ನಾಯ್ಕ ಮತ್ತು ವಸಂತಿ ದಂಪತಿ ಪುತ್ರರಾಗಿರುವ ವಿಶ್ವನಾಥ್ ಅವರು ಪುತ್ತೂರು ಸೂತ್ರಬೆಟ್ಟುವಿನಲ್ಲಿ ವಾಸ್ತವ್ಯ ಹೊಂದಿದ್ದಾರೆ.
ಈ ಹಿಂದೆ ಅವರು ಶಂಕರನಾರಾಯಣ ಠಾಣೆ, ವೇಣೂರು, ಬೆಳ್ತಂಗಡಿ, ಉಪ್ಪಿನಂಗಡಿ, ಸುಬ್ರಹ್ಮಣ್ಯ, ಪುತ್ತೂರು ಡಿವೈಎಸ್ಪಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸಿದ್ದರು.
ಕಳೆದ ಒಂದು ವರ್ಷದಿಂದ ಸುಳ್ಯ ವೃತ್ತ ನಿರೀಕ್ಷಕರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು ಎ.ಎಸ್.ಐ ಆಗಿ ಭಡ್ತಿ ಹೊಂದಿ ಸುಳ್ಯ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡು ಅಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.