ಪುತ್ತೂರು : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಆಡಳಿತ ಮಂಡಳಿಯ ವಿನೂತನ ಯೋಜನೆಯ ಅಂಗವಾಗಿ ಕುರಿಯ ಗ್ರಾಮದ ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ – ಕುರಿಯ ನೇತೃತ್ವದಲ್ಲಿ ಹಡಿಲು ಗದ್ದೆಯನ್ನು ಬೇಸಾಯ ಮಾಡಬೇಕು ಎನ್ನುವ ಕೋರಿಕೆಯ ಮೇರೆಗೆ ಕುರಿಯ ಗ್ರಾಮದ ಮುಳಿಯ ಶ್ಯಾಮ ಭಟ್ ಅವರ ಕುಟುಂಬದ ಗದ್ದೆಯಲ್ಲಿ ಪುತ್ತೂರು ಶಾಸಕರಾದ ಸಂಜೀವ ಮಠಂದೂರು ರವರು ಕೃಷಿ ಆಂದೋಲನಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಅಧ್ಯಕ್ಷರಾದ ಮುಳಿಯ ಕೇಶವ ಪ್ರಸಾದ್, ಸದಸ್ಯರಾದ ರಾಮದಾಸ್, ರಾಮಚಂದ್ರ ಕಾಮತ್, ರವೀಂದ್ರನಾಥ ರೈ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಬೂಡಿಯಾರ್ ರಾಧಾಕೃಷ್ಣ ರೈ ಹಾಗೂ ಮುಳಿಯ ಕುಟುಂಬಸ್ಥರು ಉಪಸ್ಥಿತರಿದ್ದರು.