ಪುತ್ತೂರು: ಮದುವೆಯಾಗುವುದಾಗಿ ನ೦ಬಿಸಿ ಬಲವಂತದ ದೈಹಿಕ ಸಂಪರ್ಕ ಬೆಳೆಸಿ ಯುವತಿಯನ್ನು ಗರ್ಭವತಿಯನ್ನಾಗಿಸಿ, ಮದುವೆಯಾಗಲು ನಿರಾಕರಿಸಿ ವಂಚನೆ ಮಾಡಿರುವ ಪ್ರಕರಣದ ಆರೋಪಿಯ ಜಾಮೀನು ಅರ್ಜಿಯ ವಿಚಾರಣೆ ಜು.18ರಂದು ನಡೆಯಲಿದೆ.
ಸಹಪಾಠಿಯಾಗಿದ್ದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ, ಮನೆಯಲ್ಲಿ ಯಾರೂ ಇಲ್ಲದ ವೇಳೆ ತನ್ನ ಮನೆಗೆ ಕರೆಸಿ ಆಕೆಯೊಂದಿಗೆ ಬಲವಂತದ ದೈಹಿಕ ಸಂಪರ್ಕ ಬೆಳೆಸಿ ಗರ್ಭವತಿಯನ್ನಾಗಿಸಿ ವಂಚಿಸಿರುವ ಆರೋಪದಲ್ಲಿ ಶ್ರೀಕೃಷ್ಣ ಜೆ.ರಾವ್ ಎಂಬಾತನನ್ನು ಮಹಿಳಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಶ್ರೀಕೃಷ್ಣ ಜೆ.ರಾವ್ ಜಾಮೀನಿನಲ್ಲಿ ಬಿಡುಗಡೆ ಕೋರಿ ಮಂಗಳೂರು ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು ಅರ್ಜಿಯ ವಿಚಾರಣೆ ಜು.18ರಂದು ನಡೆಯಲಿದೆ.
ಆರೋಪಿ ಪರ ವಕೀಲರಾದ ರಾಘವ ಪಿ.ಹಾಗೂ ಸುರೇಶ್ ರೈ ಪಡ್ಡಂಬೈಲು ವಾದ ಮಂಡಿಸಲಿದ್ದಾರೆ.