ಪುತ್ತೂರು : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ದ್ವಿತೀಯ ವರ್ಷದ ಕೆಸರ್‌ಡ್ ಒಂಜಿ ದಿನ ಕಾರ್ಯಕ್ರಮವು ಜು.27 ರಂದು ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.
ಈ ಕಾರ್ಯಕ್ರಮವನ್ನು ಗಣೇಶೋತ್ಸವ ಸಮಿತಿ, ಗೌರವಾಧ್ಯಕ್ಷರು ಶ್ರೀನಿವಾಸ್ ಭಟ್ ಚಂದುಕೂಡ್ಲು ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಪಡುಮಲೆ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು, ಸತೀಶ್ ರೈ ಕಟ್ಟಾವು ವಹಿಸಲಿದ್ದಾರೆ.
ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರು ಶ್ರೀ ಗಂಗಾಧರ ರೈ ಮೇಗಿನಮನೆ ವಹಿಸಲಿದ್ದು, ಹಾಗೂ ಮಂಗಳೂರು ದ.ಕ. ಜಿಲ್ಲೆ ಲೋಕ ಸಭಾ ಕ್ಷೇತ್ರ, ಸಂಸದರು, ಕ್ಯಾಪ್ಟನ್ ಬ್ರಿಜೇಶ್ ಚೌಟ , ಶಾಸಕ ಅಶೋಕ್ ಕುಮಾರ್ ರೈ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಈ ಒಂದು ಕ್ರೀಡಾ ಕೂಟದಲ್ಲಿ ಮಕ್ಕಳಿಗೆ, ಮಹಿಳೆಯರಿಗೆ, ಪುರುಷರಿಗೆ ವಿಶೇಷ ಸ್ಪರ್ದೆ ನಡೆಯಲಿದ್ದು, ಸಾರ್ವಜನಿಕರಿಗೆ ವಿಶೇಷವಾಗಿ ‘ನಿಧಿ ಶೋಧ’ ಸ್ಪರ್ಧೆಯನ್ನು ಆಯೋಜಿಸಲಾಗಿದೆ.
ಈ ವಿಶೇಷ ಕಾರ್ಯಕ್ರಮದಲ್ಲಿ ತುಳು ಚಿತ್ರ ನಟ-ನಟಿಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಜೊತೆಗೆ ಕಂಬಳ ಕೋಣಗಳ ಓಟ ಮತ್ತು ಪ್ರದರ್ಶನ ಕೂಡ ಇರಲಿದೆ.