ಪುತ್ತೂರು: ಮಂಗಳೂರಿನಿಂದ ಪುತ್ತೂರಿಗೆ ಆಗಮಿಸುತ್ತಿದ್ದ ಎಕ್ಸ್ಪ್ರೆಸ್ ಬಸ್ ನಲ್ಲಿ ಯುವತಿ ಜೊತೆ ಅಸಭ್ಯ ರೀತಿಯಲ್ಲಿ ವರ್ತಿಸಿದ ಘಟನೆ ನಡೆದಿದೆ.
ಆರೋಪಿಯನ್ನು ಸಾರ್ವಜನಿಕರು ಹಿಡಿದು ಪುತ್ತೂರಿನ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.
ಸದ್ಯ ಆರೋಪಿಯನ್ನು ಮಹಿಳಾ ಠಾಣೆಯಲ್ಲಿ ವಿಚಾರಣೆ ನಡೆಸಲಾಗುತ್ತಿದ್ದು ಯುವತಿಯ ದೂರಿನ ಮೇರೆಗೆ ಪ್ರಕರಣ ದಾಖಲಾಗಲಿದೆ ಎಂದು ತಿಳಿದು ಬಂದಿದೆ.