ವಿಟ್ಲ: ಕನ್ಯಾನ ಗ್ರಾಮ ಪಂಚಾಯತ್ ಅಧ್ಯಕ್ಷ ಕೆ.ಪಿ ಅಬ್ದುಲ್ ರಹಿಮಾನ್ ಅವರ ಪರವಾಗಿ ಹೋಗಬಾರದೆಂದು ಮಹಿಳೆಯೊಬ್ಬರಿಗೆ ವ್ಯಕ್ತಿಯೊಬ್ಬ ಬೆದರಿಕೆ ಹಾಕಿದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇತ್ತೀಚಿಗೆ ಕನ್ಯಾನ ಗ್ರಾಮ ಪಂಚಾಯತ್ ಅಧ್ಯಕ್ಷ ಕೆ ಪಿ ಅಬ್ದುಲ್ ರಹಿಮಾನ್ ಎಂಬಾತ ಮನೆಗೆ ನುಗ್ಗಿ ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ್ದಾನೆ. ಈ ಪ್ರಕರಣ ಪೊಲೀಸ್ ಠಾಣಾ ಮೆಟ್ಟಿಲೇರುತ್ತಿದ್ದಂತೆ ಕುಟುಂಬಸ್ಥರ ನಡುವೆಯೇ ವಿರೋಧಭಾಸಗಳು ಎದ್ದಿತ್ತು, ಮಹಿಳೆಯ ತಾಯಿ ಈ ಘಟನೆ ನಡೆದಿಲ್ಲ ಎಂದು ಮೊದಲು ತಿಳಿಸಿದ್ದರು. ಇದರಿಂದ ಕೋಪಗೊಂಡ ವ್ಯಕ್ತಿಯೋರ್ವ ಸಂತ್ರಸ್ಥೆಯ ಮನೆಗೆ ನುಗ್ಗಿ ಗ್ರಾಮ ಪಂಚಾಯತ್ ಅಧ್ಯಕ್ಷನ ಪರವಾಗಿ ಹೋಗಬಾರದು ಎಂದು ಬೆದರಿಕೆಯೊಡ್ಡಿದ್ದಾನೆ.
ಕನ್ಯಾನ ಗ್ರಾಮದ ತಲೆಕ್ಕಿ ಎಂಬಲ್ಲಿ ಮಹಿಳೆಯ ಮನೆಗೆ ಮಹಮ್ಮದ್ ಯಾನೆ ಸಂಗಮ್ ಮಹಮ್ಮದ್ ಎಂಬಾತನು ಅಕ್ರಮವಾಗಿ ಪ್ರವೇಶಿಸಿ ಅವಾಚ್ಯ ಶಬ್ಧಗಳಿಂದ ಬೈದು ಬೆದರಿಕೆಯೊಡ್ಡಿದ್ದಾನೆ ಎಂದು ಮಹಿಳೆ ದೂರು ನೀಡಿದ್ದಾರೆ.
ಜೂನ್,17 ರಂದು ಮಧ್ಯಾಹ್ನ ಕನ್ಯಾನ ಗ್ರಾಮದ ಸಂಗಮ್ ಸೌಂಡ್ಸ್ ಮಾಲಿಕ ಮಹಮ್ಮದ್ ಎಂಬಾತನು ಅಕ್ರಮವಾಗಿ ಮಹಿಳೆಯ ಮನೆಗೆ ಪ್ರವೇಶಿಸಿ ಕನ್ಯಾನ ಗ್ರಾಮ ಪಂಚಾಯತ್ ಅಧ್ಯಕ್ಷನ ಪರವಾಗಿ ಠಾಣೆಗೆ ಹೋದಲ್ಲಿ ಕೊಲೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದಲ್ಲದೇ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾನೆ.
ಮಹಿಳೆಗೆ ಕಾನೂನಿನ ತಿಳುವಳಿಕೆ ಇಲ್ಲದೇ ಇರುವುದರಿಂದ ಈ ಘಟನೆಯು ತಡವಾಗಿ ಬೆಳಕಿಗೆ ಬಂದಿದ್ದು, ಮಹಿಳೆಯು ವಿಟ್ಲ ಪೊಲೀಸ್ ಠಾಣೆಗೆ ತೆರಳಿ ಪ್ರಕರಣ ದಾಖಲಿಸಿದ್ದಾರೆ. ಕನ್ಯಾನ ಗ್ರಾಮ ಪಂಚಾಯಿತಿ ಅಧ್ಯಕ್ಷರ ಮೇಲೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಅತ್ಯಾಚಾರ ಯತ್ನ ಪ್ರಕರಣ ದಾಖಲಾಗಿತ್ತು.