ಸುಳ್ಯ: ಕೊಯನಾಡು ಸಮೀಪ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಕೂಡ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಅಪಘಾತಕ್ಕೊಳಗಾದ ಕಾರು ಕೊಡಗು ಜಿಲ್ಲೆ ಗೋಣಿಕೊಪ್ಪ ಮೂಲದ್ದೆಂದು ತಿಳಿದು ಬಂದಿದ್ದು, ಮೃತಪಟ್ಟವರನ್ನು ನಿಹಾದ್, ರಿಷಾನ್, ಮತ್ತು ರಾಶಿಬ್ ಎಂದು ಗುರುತಿಸಲಾಗಿದೆ. ಮತ್ತೋರ್ವ ಮೃತ ಯುವಕನ ಹೆಸರು ಇನ್ನಷ್ಟೇ ತಿಳಿಯಬೇಕಾಗಿದೆ.