ಮಂಗಳೂರು: ಬಂಟ್ವಾಳ ಮೂಲದ ಕಳೆದ ಎರಡು ವರ್ಷದಿಂದ ಮಂಗಳೂರಿನಲ್ಲಿ ವಕೀಲೆಯಾಗಿ ವೃತ್ತಿ ನಿರ್ವಹಿಸುತ್ತಿದ್ದ ರಾಜಶ್ರೀ ಜಯರಾಜ್ ಪೂಜಾರಿ ಅವರು ಅನಾರೋಗ್ಯದಿಂದ ಜುಲೈ. 25 ರಂದು ವಿಧಿವಶರಾಗಿದ್ದಾರೆ.
ತಮ್ಮ ಐದು ವರ್ಷದ ( 2017 – 2022 ) ಕಾನೂನು ಶಿಕ್ಷಣವನ್ನು ಮಂಗಳೂರಿನ ಪ್ರತಿಷ್ಠಿತ ಎಸ್ ಡಿ ಎಂ ಕಾನೂನು ಕಾಲೇಜಿನಲ್ಲಿ ಪಡೆದುಕೊಂಡಿದ್ದರು.
ಹವ್ಯಾಸದಲ್ಲಿ ಕವಯಿತ್ರಿ, ಬರಹಗಾರ್ತಿ, ಲೇಖಕಿ, ಯುವಸಾಹಿತಿ,ನಿರೂಪಕಿ, ಕಥಾವಾಚಕಿ, ಹಿನ್ನೆಲೆ ಧ್ವನಿ ಕಲಾವಿದೆ, ಯೋಗಪಟು, ರಂಗಭೂಮಿ ಕಲಾವಿದೆ, ಪುಸ್ತಕ ಪ್ರೇಮಿಯಾಗಿ ಹೀಗೆ ಹತ್ತು ಹಲವು ವಿಭಿನ್ನ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದರು.