ವಿಟ್ಲ: ಖಾಸಗಿ ಬಸ್ಸೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ ವಿಟ್ಲದ ಚಂದಳಿಕೆ ಬಳಿ ನಡೆದಿದೆ.
ಘಟನೆ ಪರಿಣಾಮ ಗಾಯಗೊಂಡ ವ್ಯಕ್ತಿಯನ್ನು ಪೆರುವಾಯಿ ನಿವಾಸಿ ಅರ್ಚಕ ಹರ್ಷ ಎಂದು ಗುರುತಿಸಲಾಗಿದೆ. ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.