ವಿಟ್ಲ: ಅಪ್ರಾಪ್ತ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣಗಳಲ್ಲಿ ನ್ಯಾಯಾಲಯವು ಆರೋಪಿ ಶಿಕ್ಷಕನನ್ನು ದೋಷಮುಕ್ತಗೊಳಿಸಿ ತೀರ್ಪು ನೀಡಿದೆ.
ವೀರಕಂಬ ಗ್ರಾಮ ವ್ಯಾಪ್ತಿಯ ಶಾಲೆಯ ಶಿಕ್ಷಕರೊಬ್ಬರು ಅದೇ ಶಾಲೆಯ ಅಪ್ರಾಪ್ತ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಿ ವಿದ್ಯಾರ್ಥಿಗಳ ಪೋಷಕರು ನೀಡಿದ ದೂರುಗಳ ಆಧಾರದಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಏಳು ದೂರುಗಳು ದಾಖಲಾಗಿದ್ದವು.
ಈ ಎಲ್ಲಾ ಏಳು ಪ್ರಕರಣಗಳಲ್ಲಿ ವಿಟ್ಲ ಪೋಲೀಸರು ತನಿಖೆ ನಡೆಸಿ ಆರೋಪಿ ಶಿಕ್ಷಕನ ವಿರುದ್ಧ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ಹಾಗೂ ಎಫ್. ಟಿ. ಎಸ್. ಸಿ (ಪೋಕ್ಸೋ) ನ್ಯಾಯಾಲಯಕ್ಕೆ ದೋಷರೋಪಣ ಪಟ್ಟಿ ಸಲ್ಲಿಸಿದ್ದರು. ಎಲ್ಲಾ ಪ್ರಕರಣಗಳಲ್ಲಿ ತನಿಖೆ ನಡೆಸಿದ ಗೌರವಾನ್ವಿತ ನ್ಯಾಯಾಲಯವು ಆರೋಪಿ ಶಿಕ್ಷಕನನ್ನು ದೋಷಮುಕ್ತಗೊಳಿಸಿ ತೀರ್ಪು ನೀಡಿದೆ.
ಆರೋಪಿ ಶಿಕ್ಷಕನ ಪರವಾಗಿ ನ್ಯಾಯವಾದಿಗಳಾದ ಮನೋಹರ.ಪಿ ವಿಟ್ಲ, ಚಿದಾನಂದ.ಕೆ ಹಾಗೂ ಮಹೇಶ್ ಅಳಿಕೆ ವಾದಿಸಿದ್ದರು.