ಮುಕ್ಕೂರು : ಮುಕ್ಕೂರು-ಕುಂಡಡ್ಕ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ 16 ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮವು ಆ.27 ರಂದು ಮುಕ್ಕೂರು ವಠಾರದಲ್ಲಿ ಜರುಗಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ದ.ಕ.ಲೋಕಸಭಾ ಕ್ಷೇತ್ರದ ಮಾಜಿ ಸದಸ್ಯ, ಗಣೇಶೋತ್ಸವದ ಸಲಹಾ ಸಮಿತಿ ಸದಸ್ಯ ನಳಿನ್ ಕುಮಾರ್ ಕಟೀಲು ಅವರು ಕುಂಜಾಡಿ ನಿವಾಸದಲ್ಲಿ ಆ.2 ರಂದು ಬಿಡುಗಡೆಗೊಳಿಸಿದರು.
ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಮಾತನಾಡಿ, ರಾಷ್ಟ್ರಭಕ್ತಿಯ ಪ್ರತೀಕದಂತಿರುವ ಗಣೇಶೋತ್ಸವವನ್ನು ಮುಕ್ಕೂರು ಪರಿಸರದಲ್ಲಿ ಅರ್ಥಪೂರ್ಣ ರೀತಿಯಲ್ಲಿ ಆಚರಿಸಲಾಗುತ್ತಿದೆ. ಈ ವರ್ಷ 16 ನೇ ವರ್ಷದ ಸಂಭ್ರಮದಲ್ಲಿದೆ. ಕಾರ್ಯಕ್ರಮವೂ ಸರ್ವರ ಒಗ್ಗೂಡುವಿಕೆಯೊಂದಿಗೆ ಅರ್ಥಪೂರ್ಣವಾಗಿ ಸಂಪನ್ನಗೊಳ್ಳಲಿ. ಮಾದರಿ ಕಾರ್ಯಕ್ರಮವಾಗಿ ಹತ್ತೂರಿಗೆ ಪಸರಿಸಲಿ ಎಂದರು.
ಈ ಸಂದರ್ಭದಲ್ಲಿ ಮುಕ್ಕೂರು-ಕುಂಡಡ್ಕ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಕಾರ್ಯದರ್ಶಿ ರಾಮಚಂದ್ರ ಚೆನ್ನಾವರ, ಮಾಜಿ ಅಧ್ಯಕ್ಷರಾದ ಪೂವಪ್ಪ ನಾಯ್ಕ ಕೊಂಡೆಪ್ಪಾಡಿ, ಜಯಂತ ಗೌಡ ಕುಂಡಡ್ಕ, ತಾರಾನಾಥ ಕುಂಡಡ್ಕ, ರಮೇಶ್ ಕಾನಾವು ಮೊದಲಾದವರು ಉಪಸ್ಥಿತರಿದ್ದರು.