ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿಯವರ ಜನ್ಮದಿನೋತ್ಸವ 2025 ರ ಅಂಗವಾಗಿ ಆಗಸ್ಟ್ 3ನೇ ತಾರೀಕು ಆದಿತ್ಯವಾರ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಪುತ್ತೂರು ಮತ್ತು ಹಲವಾರು ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಏಕಕಾಲದಲ್ಲಿ 365 ಕಡೆಗಳಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಏನ್ ಸಿ ಸಿ, ಶಾಲಾ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರನ್ನು ಒಳಗೊಂಡು ತೆಂಕಿಲನದಲ್ಲಿರುವ ತಮ್ಮ ಶಾಲಾ ಆವರಣವನ್ನು, ಕಸ ಕಡ್ಡಿಗಳನ್ನು ಸಂಗ್ರಹಿಸಿ ಸ್ವಚ್ಛಗೊಳಿಸಿ ಶುಭ್ರಗೊಳಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು ಹಾಗೂ ಹಲವಾರು ಗಿಡಗಳನ್ನು ನೆಟ್ಟು ಸಲಹುವ ವ್ಯವಸ್ಥೆಯನ್ನು ಮಾಡಿದರು.
ಕಾರ್ಯಕ್ರಮವು ಗುರು ಸೇವಾ ಬಳಗ ಪುತ್ತೂರು ಘಟಕದ ಅಧ್ಯಕ್ಷರಾದ ಶ್ರೀ ಸುಧೀರ್ ನೋಂಡ ಹಾಗೂ ಕಾರ್ಯದರ್ಶಿಗಳಾದ ಹಾಗೂ ಶಾಲಾ ರಕ್ಷಕ ಶಿಕ್ಷಕ ಸಂಘದ ನಿಕಟ ಪೂರ್ವ ಅಧ್ಯಕ್ಷರಾಗಿರುವ ಶ್ರೀಮತಿ ಹರಿಣಾಕ್ಷಿ ಜೆ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮವು ಯಶಸ್ವಿಯಾಗಿ ಸಂಪನ್ನಗೊಂಡಿತು.