ಪುತ್ತೂರು : ಬ್ಲಾಕ್ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷರಾಗಿ ಶರೋನ್ ಸಿಕ್ವೇರಾ ರನ್ನು ನೇಮಕ ಮಾಡಲಾಗಿದೆ.
ಪುತ್ತೂರಿನ ಸಾಮೆತ್ತಡ್ಕ ನಿವಾಸಿ ಶರೋನ್ ಸಿಕ್ವೇರಾ ರವರನ್ನು ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷರನ್ನಾಗಿ ನೇಮಕ ಗೊಳಿಸಲಾಗಿದೆ. ಪುತ್ತೂರಿನ ಮಾಜಿ ಶಾಸಕಿ ಶ್ರೀಮತಿ ಶಕುಂತಲಾ ಟಿ ಶೆಟ್ಟಿಯವರ ಸೂಚನೆಯಂತೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈಯವರ ಶಿಫಾರಸ್ಸಿನ ಮೇರೆಗೆ ದ ಕ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ಲಾರೆನ್ಸ್ ಡಿ ಸೋಜಾ ರವರು ನೇಮಕ ಮಾಡಿರುತ್ತಾರೆ. ಶರೋನ್ ಸಿಕ್ವೇರಾ ರವರು ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿದ್ದು, ಕಳೆದ ನಗರ ಸಭಾ ಚುನಾವಣೆಯಲ್ಲಿ ಸಾಮೆತ್ತಡ್ಕ ವಾರ್ಡ್ ನಿಂದ ಕಾಂಗ್ರೆಸ್ ಪಕ್ಷದ ವತಿಯಿಂದ ಸ್ಪರ್ಧಿಸಿರುತ್ತಾರೆ.