ವಿಟ್ಲ : ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷರಾಗಿ ಶ್ರೀನಿವಾಸ್ ಶೆಟ್ಟಿ ಕೊಲ್ಯ ರವರನ್ನು ನೇಮಕ ಮಾಡಲಾಗಿದೆ.
ವಿಟ್ಲ ಕೊಲ್ಯ ನಿವಾಸಿ ಶ್ರೀನಿವಾಸ್ ಶೆಟ್ಟಿ ರವರನ್ನು ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷರನ್ನಾಗಿ ನೇಮಕ ಗೊಳಿಸಲಾಗಿದೆ. ಪುತ್ತೂರಿನ ಮಾಜಿ ಶಾಸಕಿ ಶ್ರೀಮತಿ ಶಕುಂತಲಾ ಟಿ ಶೆಟ್ಟಿಯವರ ಸೂಚನೆಯಂತೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜಾರಾಂ ಶಿಫಾರಸ್ಸಿನ ಮೇರೆಗೆ ದ ಕ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ಲಾರೆನ್ಸ್ ಡಿ ಸೋಜಾ ರವರು ನೇಮಕ ಮಾಡಿರುತ್ತಾರೆ.