ಪುತ್ತೂರು: ದ.ಕ ಜಿಲ್ಲಾ ಮರಾಟಿ ಸಂರಕ್ಷಣಾ ಸಮಿತಿ (ರಿ.) ಮಂಗಳೂರು ವತಿಯಿಂದ “ಆಟಿದ ಕೂಟ-2025” ಕಾರ್ಯಕ್ರಮ ಬೈಪಾಸ್ ರಸ್ತೆಯ ಸಮೃದ್ಧಿ ವಾಣಿಜ್ಯ ಸಂಕೀರ್ಣದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ದ.ಕ ಜಿಲ್ಲಾ ಮರಾಟಿ ಸಂರಕ್ಷಣಾ ಸಮಿತಿ ಅಧ್ಯಕ್ಷರಾದ ಅಶೋಕ್ ನಾಯ್ಕ್ ಕೆದಿಲ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸಂಶೋಧನಾ ಪ್ರಾಧ್ಯಾಪಕರಾದ ಡಾ. ರಾಜೇಶ್ ಬೆಜ್ಜಂಗಳ ಆಗಮಿಸಲಿದ್ದು ಬಾಲಕೃಷ್ಣ ಮುರುಂಗಿ, ಶ್ರೀಧರ್ ನಾಯ್ಕ್ ಮುಂಡೋವುಮೂಲೆ ಉಪಸ್ಥಿತರಿರಲಿದ್ದಾರೆ.
ಬಳಿಕ ತುಳುನಾಡಿನ ಆಟೋಟ ಸ್ಪರ್ಧೆಗಳು ನಡೆಯಲಿದೆ ಬಳಿಕ ಮಧ್ಯಾಹ್ನ ಆಟಿದ ವನಸ್ ನಡೆಯಲಿದೆ ಬಂದು ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಸಂಘದ ಪದಾಧಿಕಾರಿಗಳು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.