ಬೆಳ್ತಂಗಡಿ: ಧರ್ಮ ಧರ್ಮಗಳ ನಡುವೆ ಸಮುದಾಯಗಳ ನಡುವೆ ವೈಮನಸ್ಯವುಂಟುಮಾಡುವ ಸಂದೇಶವನ್ನು ಫೇಸ್ ಬುಕ್ ನಲ್ಲಿ ಪ್ರಸಾರ ಮಾಡಿದ ಬಗ್ಗೆ ವಸಂತ ಗಿಳಿಯಾರ್ ವಿರುದ್ಧ ಶೇಖರ ಲಾಯಿಲ ರವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದು ಪ್ರಕರಣ ದಾಖಲಿಸಲಾಗಿದೆ.
ವಸಂತ ಗಿಳಿಯಾರ್ ಅವರು ಫೇಸ್ ಬುಕ್ ನಲ್ಲಿ ಹಾಕಿರುವ ಸಂದೇಶದಿಂದ ಧರ್ಮ ಧರ್ಮಗಳ ನಡುವೆ ಹಾಗೂ ಸಮುದಾಯಗಳ ನಡುವೆ ವೈಮನಸ್ಸು ಮೂಡುವಂತಿದ್ದು ಇದರಿಂದ ಸಾಮಾಜಿಕ ಸ್ವಾಸ್ಥ್ಯ ಕೆಡುವ ಸಾಧ್ಯತೆಗಳಿವೆ ಎಂಬುದಾಗಿ ದೂರು ನೀಡಿದ್ದು ಅದರಂತೆ ಬೆಳ್ತಂಗಡಿ ಠಾಣೆಯಲ್ಲಿ ಸೆಕ್ಷನ್ 196()(ಎ), 353(2) ಬಿಎನ್‌ಎಸ್ ನಂತೆ ಪ್ರಕರಣ ದಾಖಲಿಸಲಾಗಿದೆ.