ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ ನ “ಭಾರತೀಯ ಸೇನೆ” ಎಂಬ ಪೇಸ್ ಬುಕ್ ಪೇಜನ್ನು ಹೊಂದಿರುವ ವ್ಯಕ್ತಿಯು, ಧರ್ಮಗಳ ನಡುವೆ ಹಾಗೂ ಸಮುದಾಯಗಳ ನಡುವೆ ವೈಮನಸ್ಸನ್ನು ಉಂಟಾಗುವಂತೆ, ಮತ್ತು ಕೋಮು ಸೌಹಾರ್ದತೆಗೆ ದಕ್ಕೆಯಾಗುವಂತೆ, ಸುಳ್ಳು ಸುದ್ದಿ ಪ್ರಸಾರ ಮಾಡಿ ಸಾರ್ವಜನಿಕ ವಲಯದಲ್ಲಿ ಆತಂಕ ಮೂಡುವಂತೆ ಮಾಡಿರುವುದು ಕಂಡುಬಂದ ಹಿನ್ನೆಲೆಯಲ್ಲಿ, ದಿನಾಂಕ :- 10.08.2025 ರಂದು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 70/2025 ಕಲಂ: 196(1)(a) 353(2) BNS 2023 ರಂತೆ ಸುಮೋಟೋ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.