ಬೆಂಗಳೂರು: ಮನೆಯೊಂದರಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು 7 ಜನರಿಗೆ ಗಾಯಗಳಾಗಿದ್ದು, 8ಕ್ಕೂ ಹೆಚ್ಚು ಮನೆಗಳಿಗೆ ಹಾನಿ ಉಂಟಾಗಿರುವಂತಹ ಘಟನೆ ನಗರದ ವಿಲ್ಸನ್ ಗಾರ್ಡನ್ನಲ್ಲಿ ನಡೆದಿದೆ. ಕಸ್ತೂರಿ(28), ಸರಸಮ್ಮ(50), ಸಬ್ರಿನ್ ಬಾನು(35), ಮುಬಾರಕ್(10), ಫಾತಿಮಾ(8) ಸೇರಿ 7 ಜನರಿಗೆ ಗಾಯಗಳಾಗಿದ್ದು, ಸಂಜಯ್ಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಘಟನಾ ಸ್ಥಳಕ್ಕೆ ಆಡುಗೋಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದರು. ಸದ್ಯ ಸ್ಫೋಟಗೊಂಡಿರುವ ಮನೆ ಸುತ್ತ ಮುತ್ತಲಿನ ನಿವಾಸಿಗಳಲ್ಲಿ ಆತಂಕ ಸೃಷ್ಟಿಯಾಗಿದೆ.