ಮಾಣಿ ಯುವಕ ಮಂಡಲದ ಆಶ್ರಯದಲ್ಲಿ ಮಾಣಿ ಗಾಂಧಿ ಮೈದಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವವು ನಡೆಯಿತು.
ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ, ತುಂಬೆಗುತ್ತು ಚಂದ್ರಪ್ರಕಾಶ್ ಶೆಟ್ಟಿಯವರು, ಸಾಮರಸ್ಯದ ಸಂಕೇತವಾಗಿ ನಡೆಯುತ್ತಿರುವ ಮೊಸರು ಕುಡಿಕೆ ಉತ್ಸವವು ಊರಿಗೆ ಮಾದರಿ. ಇದನ್ನು ಉಳಿಸಿಕೊಳ್ಳುವುದು ಎಲ್ಲರ ಜವಾಬ್ದಾರಿಯಾಗಿದೆ. ಪ್ರಾಮಾಣಿಕವಾದ ಪ್ರಯತ್ನದೊಂದಿಗೆ ಮುಂದಿನ ದಿನಗಳಲ್ಲಿ ಇನ್ನಷ್ಷು ಮುತುವರ್ಜಿಯಿಂದ ವಿಜ್ರಂಭಣೆಯಿಂದ ಆಚರಿಸಬೇಕು ಎಂದು ಹೇಳಿದರು.
ಮಾಜಿ ಸಚಿವ ಬಿ. ರಮಾನಾಥ ರೈಯವರು ಕಾರ್ಯಕ್ರಮಕ್ಕೆ ಆಗಮಿಸಿ ಶುಭ ಹಾರೈಸಿದರು.
ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನದ ಆಡಳಿತ ಮೊಕ್ತೇಸರ ಮಾಣಿಗುತ್ತು ಸಚಿನ್ ರೈಯವರು ಅಧ್ಯಕ್ಷತೆ ವಹಿಸಿದ್ದರು.
ಹಿರಿಯ ಕಂಬಳ ಓಟಗಾರ ಶಶಿನಂದ ಶೆಟ್ಟಿ ಸಾಗು ಮತ್ತು ಕಳೆದ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ವಿಶಿಷ್ಟ ಸಾಧನೆಯನ್ನು ಮಾಡಿದ ವೈಷ್ಣವಿ ಮಾಣಿ ಇವರನ್ನು ಸಮಾರಂಭದಲ್ಲಿ ಗೌರವಿಸಲಾಯಿತು.
ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಜಗನ್ನಾಥ ಚೌಟ ಬದಿಗುಡ್ಡೆ, ಬೂಡಾ ಅಧ್ಯಕ್ಷ ಬೇಬಿ ಕುಂದರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷೆ ಜಯಂತಿ ಪೂಜಾರಿ, ನೇರಳಕಟ್ಟೆ ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ನಿರ್ದೇಶಕ ನಿರಂಜನ್ ರೈ ಕುರ್ಲೆತ್ತಿಮಾರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಮಾಣಿ ಶ್ರೀ ರಾಜರಾಜೇಶ್ವರಿ ಭಜನಾ ಮಂಡಳಿಯ ಸದಸ್ಯರಿಂದ ಭಜನಾ ಸಂಕೀರ್ತನೆ ನಡೆಯಿತು.
ಪುರುಷರಿಗೆ, ಮಹಿಳೆಯರಿಗೆ ಮತ್ತು ಮಕ್ಕಳಿಗೆ ಬೇರೆ ಬೇರೆ ವಿಭಾಗಗಳಲ್ಲಿ ವಿವಿಧ ಆಟೋಟ ಸ್ಪರ್ಧೆಗಳು ನಡೆಯಿತು. ಸ್ಪರ್ಧಾ ವಿಜೇತರನ್ನು ಬಹುಮಾನ ನೀಡಿ ಗೌರವಿಸಲಾಯಿತು.
ಯುವಕ ಮಂಡಲದ ಗೌರವಾಧ್ಯಕ್ಷ ನಾಗರಾಜ ಶೆಟ್ಟಿ ಸಾಗು, ಕಾರ್ಯದರ್ಶಿ ಜಗದೀಶ್ ಜೈನ್, ಕೋಶಾಧಿಕಾರಿ ನಾಗರಾಜ ಪೂಜಾರಿ, ಕ್ರೀಡಾ ಕಾರ್ಯದರ್ಶಿ ದಯಾನಂದ ಪೂಜಾರಿ, ಮಾಣಿ ಗ್ರಾಮ ಪಂಚಾಯತ್ ಸದಸ್ಯ ಮೆಲ್ವಿನ್ ಕಿಶೋರ್ ಮಾರ್ಟಿಸ್, ಶಾರದಾ ಯುವ ವೇದಿಕೆಯ ಅಧ್ಯಕ್ಷ ಭರತ್ ಶೆಟ್ಟಿ ಹಳಿರ, ಕೋಡಿ ಫ್ರೆಂಡ್ಸ್ ಅಧ್ಯಕ್ಷ ನವೀನ್ ವಿಠಲಕೋಡಿ, ಪ್ರಮುಖರಾದ ಹರೀಶ್ ಶೆಟ್ಟಿ ಸಾಗು, ಮೂಸಾ ಕರೀಂ, ವಿಕೇಶ್ ಶೆಟ್ಟಿ, ಅಬ್ದುಲ್ ಮಜೀದ್, ಪ್ರಕಾಶ್ ಮಾಣಿ, ಅಬ್ದುಲ್ ಅಜೀಜ್ ಹಳಿರ, ಹರೀಶ್ ಮಾಣಿ, ಅಶ್ರಫ್ ಕಾಪಿಕಾಡು ಮತ್ತಿತರರು ಉಪಸ್ಥಿತರಿದ್ದರು.
ಯುವಕ ಮಂಡಲದ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಗೌರವ ಸಲಹೆಗಾರ ಬಾಲಕೃಷ್ಣ ಆಳ್ವ ಕೊಡಾಜೆ ಕಾರ್ಯಕ್ರಮ ನಿರ್ವಹಿಸಿದರು.