ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾನಿಲಯ ನಡೆಸಿದ 2024 – 25 ನೇ ಸಾಲಿನ ಭರತನಾಟ್ಯ ಜ್ಯೂನಿಯರ್ ಪರೀಕ್ಷೆಯಲ್ಲಿ ಕು.ಶ್ರೀರಾಜ್ಞೀ ಏನ್. ಕೆ ಇವರು ಶೇಕಡಾ 87.25% ಫಲಿತಾಂಶದೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ ಹೊಂದಿರುತ್ತಾರೆ. ಇವರು ಕೃಷಿಕರಾದ ಶ್ರೀ ಕೃಷ್ಣ ಕಿರಣ ಏನ್ ಜೆ, ನಿಟಿಲೆ ಹಾಗೂ
ವಿಠಲ ಪದವಿ ಪೂರ್ವ ಕಾಲೇಜು ವಿಭಾಗದಲ್ಲಿ ಉಪನ್ಯಾಸಕಿಯಾಗಿರುವ ಶ್ರೀಮತಿ ರಶ್ಮಿ ಕೃಷ್ಣ ದಂಪತಿಗಳ ಪುತ್ರಿಯಾಗಿದ್ದು ವಿಟ್ಲದ ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದಾರೆ.
ಇವಳು ನೃತ್ಯೋಪಾಸನ ಕಲಾ ಅಕಾಡೆಮಿ (ರಿ) ಪುತ್ತೂರು ಇದರ ವಿಟ್ಲ ಶಾಖೆಯ ವಿದ್ಯಾರ್ಥಿನಿಯಾಗಿದ್ದು ವಿದುಷಿ ಶ್ರೀಮತಿ ಶಾಲಿನಿ ಆತ್ಮಭೂಷಣ್ ಇವರ ಶಿಷ್ಯ.