ದಿನಾಂಕ 14.08.2025 ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತುಂಬೆ ಬಳಿ ಜಾನುವಾರು ಕಳವು ಹಾಗೂ ಅದರ ಅಂಗಾಗಗಳು ಮರುದಿನ ದಿನಾಂಕ 15.08.2025 ರಂದು ಅಲ್ಲೆ ಸಮೀಪದಲ್ಲಿ ಪತ್ತೆಯಾಗ ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅಕ್ರ:125/2025, ಕಲಂ: 303(2), BNS, ಕಲಂ: 4,12 ಕರ್ನಾಟಕ ಜಾನುವಾರು ಹತ್ಯಾ ಪ್ರತಿಬಂಧಕ ಸಂರಕ್ಷಣಾ ಕಾಯ್ದೆ-2020 ಹಾಗೂ ಕಲಂ 11(ಡಿ) ಪ್ರಾಣಿ ಹಿಂಸೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿ, ಸದ್ರಿ ಕೃತ್ಯದಲ್ಲಿ ಭಾಗಿಯಾಗಿದ್ದ
ಉಳ್ಳಾಲ ಚೆಂಬುಗುಡ್ಡೆ ನಿವಾಸಿ ಇರ್ಷಾದ್ (34),ಮಂಗಳೂರು ಕುದ್ರೋಳಿ ನಿವಾಸಿ ಮಹಮ್ಮದ್ ಮನ್ಸೂರ್ (48), ಮಂಗಳೂರು ಕಣ್ಣೂರು ನಿವಾಸಿ ಅಬ್ದುಲ್ ಅಝೀಮ್ (18) ಎಂಬವರುಗಳನ್ನು ಈ ದಿನ ದಿನಾಂಕ 05.09.2025 ರಂದು ದಸ್ತಗಿರಿ ಮಾಡಲಾಗಿರುತ್ತದೆ.
ಆರೋಪಿಗಳ ವಿಚಾರಣೆಯ ವೇಳೆ ದಿನಾಂಕ: 04.09.2025 ರಂದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಕ್ರ:76/2025, Sec:THE BHARATIYA NYAYA SANHITA (BNS), 2023 (U/s-331(4),305); THE KARNATAKA PREVENTION OF SLAUGHTER AND PRESERVATION OF CATTLE ACT-2020 (U/s-4,5) ಪ್ರಕರಣದಲ್ಲೂ ಆರೋಪಿಗಳಾಗಿರುವುದು ತಿಳಿದುಬಂದಿದ್ದು, ತನಿಖೆ ಪ್ರಗತಿಯಲ್ಲಿದೆ.