ಕಾರವಾರ: ಬೆಂಗಳೂರಿನಿಂದ ಕುಂದಾಪುರಕ್ಕೆ ಪ್ರವಾಸಕ್ಕೆ ಬಂದಿದ್ದ ಮೂವರು ಯುವಕರು ಸಮುದ್ರದ ಪಾಲಾಗಿದ್ದಾರೆ.
ಕುಂದಾಪುರ ತಾಲೂಕಿನ ಗೋಪಾಡಿ ಚರ್ಕಿಕಡು ಎಂಬಲ್ಲಿ ಈ ದುರ್ಘಟನೆ ಸಂಭವಿಸಿದೆ. ಬೆಂಗಳೂರಿನಿಂದ ಹತ್ತು ಜನ ಯುವಕರು ಬಂದಿದ್ದರು. ಇದರಲ್ಲಿ 7 ಜನ ಜನ ಯುವಕರು ಸಮುದ್ರದ ತೀರದಲ್ಲಿ ಆಟವಾಡುತ್ತಾ ನೀರಿಗೆ ಇಳಿದಿದ್ದರು. ನಾಲ್ವರು ಕೊಚ್ಚಿಹೋಗಿದ್ದರು. ಓರ್ವನನ್ನು ರಕ್ಷಿಸಲಾಗಿದೆ.
ಇಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ಓರ್ವ ನಾಪತ್ತೆಯಾಗಿದ್ದು, ಆತನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಕುಂದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.