ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಬಿಜೆಪಿ ಪದಾಧಿಕಾರಿಗಳಾಗಿ ಪಕ್ಷದಲ್ಲಿ ಕೆಲಸ ನಿರ್ವಹಿಸುತ್ತಿರುವ ಪ್ರಮುಖರ ಸಭೆಯು ಪರಿವಾರ ಸೇವಾ ಟ್ರಸ್ಟ್ ನ ಕಛೇರಿಯಲ್ಲಿ ನಡೆಯಿತು.
ಪುತ್ತಿಲ ಪರಿವಾರ ಭಾರತೀಯ ಜನತಾ ಪಾರ್ಟಿ ಜೊತೆ ವಿಲೀನವಾದ ಸಂಧರ್ಭದಲ್ಲಿ ಪಕ್ಷದ ಮತ್ತು ಸಂಘದ ಪ್ರಮುಖ ನಾಯಕರು ಅರುಣ್ ಪುತ್ತಿಲರಿಗೆ ನೀಡಿದ ಭರವಸೆಯನ್ನು ಈಡೇರಿಸದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಪಕ್ಷದ ಪದಾಧಿಕಾರಿಗಳು ತಮ್ಮ ಮುಂದಿನ ನಡೆಯ ಬಗ್ಗೆ ಅಭಿಪ್ರಾಯ ಮಂಡಿಸಿದರು.
ಕಳೆದ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಸಂಸದರು,ರಾಜ್ಯಧ್ಯಕ್ಷರು, ಜಿಲ್ಲಾಧ್ಯಕ್ಷರು, ನೀಡಿದ ಭರವಸೆ ಈಡೇರಿಸದಿರುವುದು ಬೂತ್ ಮಟ್ಟದಲ್ಲಿ ಕಾರ್ಯಕರ್ತರನ್ನು ಕೆರಳಿಸಿದೆ.ಕೇಸರಿ ಶಾಲನ್ನು ಹಾಕುವ ದೇವ ದುರ್ಲಭ ಕಾರ್ಯಕರ್ತರನ್ನು ಅವಮಾನಿಸಿ ಹೇಳಿಕೆ ನೀಡುವ ಸಂಘ ಮತ್ತು ಪಕ್ಷದ ನಾಯಕರ ನಡೆಗೆ ಸಭೆಯಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಯಿತು.
ತಕ್ಷಣ ಪಕ್ಷದ ಮತ್ತು ಸಂಘದ ಹಿರಿಯರು ಸಮನ್ವಯ ಸಾಧಿಸಿ ಪರಿಹಾರ ಮಾಡಬೇಕೆಂದು ಈ ಸಭೆಯಲ್ಲಿ ನಿರ್ಣಯಿಸಲಾಯಿತು ಮುಂದಿನ ಕೆಲಸ ಕಾರ್ಯಗಳ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದು ಟ್ರಸ್ಟಿನ ಅಧ್ಯಕ್ಷರು ಮತ್ತು ತಂಡ ತಗೊಳ್ಳುವ ನಿರ್ಣಯಕ್ಕೆ ತಾವೆಲ್ಲರೂ ಬದ್ದರಾಗಿರುವುದಾಗಿ ತಿಳಿಸಿದರು.
ಸಂಘ ಶತಾಬ್ದಿಯ ನಿಮಿತ್ತ ನವಂಬರ್ ತಿಂಗಳಿನಲ್ಲಿ ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ ಮತ್ತು ಹಿಂದವಿ ಸಾಮ್ರಾಜ್ಯೋತ್ಸವದ ಯಶಸ್ವಿಗೆ ಪೂರ್ಣ ಪ್ರಮಾಣದಲ್ಲಿ ತೊಡಗಿಸಕೊಳ್ಳಬೇಕೆಂದು ನಿರ್ಣಯಿಸಲಾಯಿತು.