ಸೋಶಿಯಲ್ ಮೀಡಿಯಾವೇ ಹಾಗೆ, ಜನಸಾಮಾನ್ಯರನ್ನು ರಾತ್ರಿ ಬೆಳಗಾಗುವಷ್ಟರಲ್ಲಿ ಫೇಮಸ್ ಮಾಡಿ ಬಿಡುತ್ತದೆ. ಕೆಲವರು ರೀಲ್ಸ್ ಸೇರಿದಂತೆ ನಾನಾ ರೀತಿಯ ವಿಡಿಯೋ ಮಾಡಿ ಫೇಮಸ್ ಆಗಲು ನೋಡುತ್ತಾರೆ. ಇನ್ನು ಕೆಲವರು ಒಂದೇ ಒಂದು ವಿಡಿಯೋದಿಂದನೇ ಹವಾ ಸೃಷ್ಟಿಸಿ ಬಿಡುತ್ತಾರೆ. ಇದಕ್ಕೆ ಈ ಹುಡುಗಿಯೇ ಸಾಕ್ಷಿ. ಹೌದು, ಕನ್ನಡ ಸಿನಿಮಾದ ಹಾಡೊಂದನ್ನು ತನ್ನದೇ ದಾಟಿಯಲ್ಲಿ ಹಾಡಿ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದ್ದಾಳೆ. ಈ ವಿಡಿಯೋಗೆ ನೆಟ್ಟಿಗರಿಂದ ಮೆಚ್ಚುಗೆ ವ್ಯಕ್ತವಾಗಿವೆ.
ಈ ವಿಡಿಯೋದಲ್ಲಿ ಯುವತಿಯೊಬ್ಬಳು ಹೂವಿನ ಬಾಣದಂತೆ ಹಾಡನ್ನು ಹಾಡುವುದನ್ನು ನೋಡಬಹುದು. ತನ್ನ ಅಕ್ಕ ಪಕ್ಕದಲ್ಲಿ ನಿಂತಿರುವ ಸ್ನೇಹಿತರು ಈಕೆ ಹಾಡು ಹಾಡುವ ರೀತಿಗೆ ನಕ್ಕಿದ್ದಾರೆ. ಆದರೆ ಈಕೆ ಮಾತ್ರ ಹಾಡು ಹಾಡುವುದನ್ನು ಯಾವುದೇ ಕಾರಣಕ್ಕೂ ನಿಲ್ಲಿಸಿಲ್ಲ. ಈ ವಿಡಿಯೋದ ಕೊನೆಗೆ ಎಲ್ಲರೂ ಚಪ್ಪಾಳೆ ತಟ್ಟಿ ಹುರಿದುಂಬಿಸಿ ಮೆಚ್ಚುಗೆ ವ್ಯಕ್ತಪಡಿಸಿರುವುದನ್ನು ಕಾಣಬಹುದು.