ದಿನಾಂಕ 09/09/2025 ಮಹೇಶ್ ವಿಕ್ರಂ ಹೆಗ್ಡೆ ಎಂಬುವರು Face book ಖಾತೆಯಲ್ಲಿ POST CARD ಹೆಸರಿನಲ್ಲಿ -“ಮಾನ್ಯ ಮುಖ್ಯ ಮಂತ್ರಿಗಳೇ, ಒಂದೇ ಒಂದು ಬಾರಿ ಗಣಪನ ಮೆರವಣಿಗೆಯ ಮೇಲೆ ಕಲ್ಲು ತೂರಿದವರ ಮಸೀದಿಯ ಮೇಲೆ ಬುಲ್ಲೋಜರ್ ನುಗ್ಗಿಸುವ ಧೈರ್ಯ ಮಾಡಿ ನೋಡಿ, ಮುಂದಿನ ವರ್ಷ ರಾಜ್ಯದ ಯಾವ ಮೂಲೆಯಲ್ಲೂ ಇಂತಹ ಪ್ರಕರಣ ಮರುಕಳಿಸುವುದಿಲ್ಲ” ಎಂಬ ಬರಹವನ್ನು Post ಪೋಸ್ಟ್ ಮಾಡಿದ್ದು, ಈ ವಿಷಯ ಸಂಬಂಧ ಮೂಡಬಿದರೆ ಪೊಲೀಸ್ ಠಾಣೆಯಲ್ಲಿ ಅ.ಕ್ರ ನಂ: 143/2025 ಕಲಂ: 353(2) ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಾಗಿರುತ್ತದೆ.
ಈ ಪ್ರಕರಣದಲ್ಲಿ ತನಿಖೆಯನ್ನು ಕೈಗೊಂಡು ಮೂಡಬಿದರೆ ಪೊಲೀಸರು ಬೆಂಗಳೂರಿನಲ್ಲಿ ಇವರನ್ನು ವಶಕ್ಕೆ ಪಡೆದು ಈ ದಿನ ದಿನಾಂಕ: 12-09-2025 ರಂದು ಮೂಡಬಿದರೆಯ ಮಾನ್ಯ ಸಿ.ಜೆ ಮತ್ತು ಕೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಮಾನ್ಯ ನ್ಯಾಯಾಲಯವು ಮಹೇಶ್ ವಿಕ್ರಂ ಹೆಗ್ಡೆ (45) ತಂದೆ: ವಿಕ್ರಂ ಹೆಗ್ಡೆ ಇವರಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.