ಪುತ್ತೂರು: ದೇವಳದ ಬಳಿ ಮಹಿಳೆಯೋರ್ವರಿಗೆ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದ್ದು ಈ ಸಂಬಂಧ ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳು ಲೀಲು ಎಂಬವರು ನೀಡಿದ ದೂರಿನ ಮೇರೆಗೆ ದೇವಳದ ವಠಾರದಲ್ಲಿ ಕೆಲಸ ಮಾಡುತ್ತಿದ್ದ ಶರತ್ ಎಂಬವರ ವಿರುದ್ದ ಪ್ರಕರಣ ದಾಖಲಾಗಿದೆ.