ಮಂಗಳೂರು: ಸಿ.ಇ.ಎನ್ ಅಪರಾಧ ಪೊಲೀಸ್ ಠಾಣಾ ಅ.ಕ್ರ. 41/2025 ಕಲಂ. 66(ಸಿ) ಐಟಿ ಕಾಯ್ದೆ ಹಾಗೂ ಕಲಂ. 56, 353(1), 192 ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ
ಆರೋಪಿತನಾದ ಮೊಹಮ್ಮದ್ ಕೈಫ್ (22) ತಂದೆ: ಶರೀಫ್, ವಾಸ: ಕಿಲ್ಲೂರು ಮನೆ, ಮಾಲವಂತಿಗೆ , ದಕ್ಷಿಣ ಕನ್ನಡ.
ಎಂಬಾತನ ವಿರುದ್ಧ 19-07-2025 ರಂದು ಮಂಗಳೂರು ನಗರ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ Karavali_tigers ಎಂಬ Instagram ಪೇಜ್ ಮುಖಾಂತರ ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಟ್ಟಿದ್ದ ಆಧಾರದಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದಲ್ಲಿ Karavali_tigers ಎಂಬ Instagram ಪೇಜ್ ನಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಡುತ್ತಿದ್ದ ಆರೋಪಿತನನ್ನು ತಾಂತ್ರಿಕ ಸಾಕ್ಷ್ಯಗಳ ಮುಖಾಂತರ ಪತ್ತೆ ಮಾಡಿ, ಆರೋಪಿತನು ತಮಿಳುನಾಡಿಲ್ಲಿರುವ ಬಗ್ಗೆ ಮಾಹಿತಿ ಸಂಗ್ರಹಿಸಿ, ತಮಿಳುನಾಡು ರಾಜ್ಯಕ್ಕೆ ತೆರಳಿ ಆರೋಪಿತನನ್ನು ತಮಿಳುನಾಡಿನಲ್ಲಿ ವಶಕ್ಕೆ ಪಡೆದುಕೊಂಡು ಬಂದು ದಸ್ತಗಿರಿ ಕ್ರಮ ಕೈಗೊಂಡು ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿರುತ್ತದೆ.
ಅಲ್ಲದೇ Karavali_tigers ಎಂಬ ಪೇಜ್ ವಿರುದ್ದ ಮಂಗಳೂರು ನಗರದ ಬಜ್ಪೆ ಪೊಲೀಸ್ ಠಾಣೆಯಲ್ಲಿಯೂ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿರುತ್ತದೆ.