ವಿಟ್ಲ: ಮನೆಯವರು ಕೆಲಸಕ್ಕೆ ಹೋಗಿದ್ದ ಸಮಯ ಮನೆಯಲ್ಲಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ವಿಟ್ಲದಲ್ಲಿ ನಡೆದಿದೆ.
ನಾರಾಯಣ (42) ಬಂಟ್ವಾಳ ತಾಲೂಕು ಎಂಬ ವ್ಯಕ್ತಿಯು ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿ.
ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ದಿನಾಂಕ 22-09-2025 ರಂದು ಅಕ್ರ 133/2025 ಕಲಂ: 7, 8 POCSO Act 2012 ಮತ್ತು 329(4), 75 BNS-2023 ನಂತೆ ಪ್ರಕರಣ ದಾಖಲಾಗಿದೆ.
ಆರೋಪಿಯನ್ನು ಪೊಲೀಸರು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆರೋಪಿಗೆ ಮಾನ್ಯ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ.