ಪುತ್ತೂರು: ವಿಷ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಅ.3 ರಂದು ಕುಂಬ್ರ ಸಾರೆಪುಣಿಯಿಂದ ವರದಿಯಾಗಿದೆ.
ಸಾರೆಪುಣಿ ನಿವಾಸಿ ಯೋಗೀಶ್ (33) ಮೃತಪಟ್ಟವರು. ಅವರು ಸೆ.25ರಂದು ಮನೆಯಲ್ಲಿ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದರು.
ತಕ್ಷಣ ಅವರನ್ನು ಮಂಗಳೂರಿನ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ವಿಷ ಸೇವಿಸುವ ಮುನ್ನ ಮನೆಯಲ್ಲಿ ಡೆತ್ ನೋಟ್ ಬರೆದಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೃತರು ತಾಯಿ ಶಶಿಕಲಾ, ಪತ್ನಿ ಸುಮಿತ್ರ ಹಾಗೂ ಇಬ್ಬರು ಪುತ್ರಿಯರನ್ನು ಹಾಗೂ ಇಬ್ಬರು ಸಹೋದರರನ್ನು ಅಗಲಿದ್ದಾರೆ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.