ವಿಟ್ಲ: ಮಹಮ್ಮದ್ ಅಶ್ರಫ್ ತಾವರಕಡನ್ (ವಯಸ್ಸು 53) ಎಂಬವರು, ಕೇರಳದವರು ಹಾಗೂ ಸೌದಿಯಲ್ಲಿ ಉದ್ಯೋಗದಲ್ಲಿದ್ದಾರೆ. 2024ರ ಸೆಪ್ಟೆಂಬರ್‌ನಲ್ಲಿ ಮದುವೆಯ ಸಲುವಾಗಿ ಮಂಗಳೂರಿಗೆ ಬಂದಿದ್ದು, ಅಲ್ಲಿಗೆ ಕರೆಸಿದ ಬಶೀರ್, ಸಫಿಯಾ ಮತ್ತು ಇತರ ಆರೋಪಿತರು ಅವರನ್ನು ಹೆಣ್ಣು ನೋಡೋ ನೆಪದಲ್ಲಿ ಫೋಟೋ, ವಿಡಿಯೋ ತೆಗೆದು, ನಂತರ ಅವುಗಳನ್ನು ಲೀಕ್ ಮಾಡುವುದಾಗಿ ಬೆದರಿಸಿ 44.80 ಲಕ್ಷ ರೂಪಾಯಿ ಹಣ ವಂಚಿಸಿದ್ದಾರೆ. ಎಂದು ಪಿರಿಯಾದಿದಾರರು ನೀಡಿದ ದೂರಿನಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 145/2025 ಕಲಂ: 318(4), 308(2), 115(2), 351(2), r/w 3(5) BNS-2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ