ವಿಟ್ಲ: ಅನಗತ್ಯವಾಗಿ ವಿಟ್ಲ ಪೇಟೆ ಪ್ರವೇಶಿಸಿ ನೋ ಪಾರ್ಕಿಂಗ್ ನಲ್ಲಿ ವಾಹನಗಳನ್ನು ನಿಲ್ಲಿಸಿ ವಾಹನ ದಟ್ಟಣೆಗೆ ಕಾರಣವಾದ ವಾಹನಗಳನ್ನು ವಿಟ್ಲ ಪೊಲೀಸರು ಮುಟ್ಟುಗೋಲು ಹಾಕಿದ್ದಾರೆ.
ಜಿಲ್ಲಾಧಿಕಾರಿ ಲಾಕ್ ಡೌನ್ ಸಡಿಲಿಕೆಗೊಳಿಸಿದ್ದರಿಂದ ಇಂದು ಪೇಟೆಯಲ್ಲಿ ಹೆಚ್ಚಿನ ವಾಹನ ದಟ್ಟನೆ ಉಂಟಾಗಿದೆ.
ವಿಟ್ಲ-ಪುತ್ತೂರು ರಸ್ತೆಯ ಎಂಪೈರ್ ಮಾಲ್ ನ ಮುಂಭಾಗ ದ್ವಿಚಕ್ರವಾಹನಗಳನ್ನು ನಿಲ್ಲಿಸಿ ಅದರ ಸವಾರರು ತೆರಳಿದ್ದರು. ಇದರಿಂದ ಪುತ್ತೂರು ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿದೆ. ಈ ಬಗ್ಗೆ ಕಾರ್ಯಾಚರಣೆಗೆ ಇಳಿದ ವಿಟ್ಲ ಎಸೈ ವಿನೋದ್ ಕುಮಾರ್ ರೆಡ್ಡಿ ನೇತೃತ್ವದ ಪೊಲೀಸರ ತಂಡ ಸುಮಾರು 27 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದುಕೊಂಡು ದಂಡ ವಿಧಿಸಿದ್ದಾರೆ.
ವಿಟ್ಲ ಪೊಲೀಸ್ ಠಾಣೆಯ ಪ್ರೋಬೆಷನರಿ ಎಸೈ ಮಂಜುನಾಥ, ಎಎಸೈ ಕರುಣಾಕರ ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.