ಪುತ್ತೂರು: ಅ.20 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆದ ಅಶೋಕ ಜನಮನ 2025 ಈ ಕಾರ್ಯಕ್ರಮಕ್ಕೆ ಬಂದು ಸಭಾಂಗಣದಲ್ಲಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದವರ ಬಿಲನ್ನು ಶಾಸಕ ಅಶೋಕ್ ರೈ ಅವರೇ ಭರಿಸಿದ್ದಾರೆ.
ಖಾಸಗಿ ಆಸ್ಪತ್ರೆಯಲ್ಲಿ ದಾಖಲಾದ ಇಬ್ಬರು ವ್ಯಕ್ತಿಗಳ ಆಸ್ಪತ್ರೆ ಚಿಕಿತ್ಸಾ ಖರ್ಚು ವೆಚ್ಚವನ್ನು ಭರಿಸಲಾಗಿದೆ.
ಅಶೋಕಜನಮನ ಕಾರ್ಯಕ್ರಮದಲ್ಲಿ ನಿರೀಕ್ಷೆಗಿಂತ ಮೀರಿ ಜನ ಆಗಮಿಸಿದ ಕಾರಣ ಜನ ಸಂದಣಿಯ ನಡುವೆ ಸಿಲುಕಿ ಏಳೆಂಟು ಮಂದಿ ಅಸ್ವಸ್ಥರಾಗಿದ್ದರು. ಈ ಪೈಕಿ ಕೆಲವರನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಬ್ಬರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಅಸ್ವಸ್ಥರಾದವರೆಲ್ಲರೂ ಗುಣಮುಖರಾಗಿ ಮನೆ ಸೇರಿದ್ದಾರೆ.