ವಿಟ್ಲ: ಕಾಶಿಮಠ ನಿವಾಸಿಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ವಿಟ್ಲ ಕಾಶಿಮಠ ನಿವಾಸಿ ರಾಮಕ್ಕ (79) ಆತ್ಮಹತ್ಯೆ ಮಾಡಿಕೊಂಡವರು.
ಫ್ರೆಂಡ್ಸ್ ವಿಟ್ಲ ತಂಡದ ಮುರಳೀಧರ ಮತ್ತು ತಂಡ ಮೃತದೇಹವನ್ನು ಮೇಲಕ್ಕೆ ಎತ್ತಿದರು.
ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತರು ಇಬ್ಬರು ಪುತ್ರರು ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.