ಪುತ್ತೂರು : ಬಡ ಅನಾರೋಗ್ಯ ಪೀಡಿತರಿಗೆ ಸಹಾಯ, ಆರ್ಥಿಕವಾಗಿ ಹಿಂದುಳಿದ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವು, ಹಾಗೂ ಇನ್ನಿತರ ಸಮಾಜಮುಖಿ ಕೆಲಸಗಳನ್ನು ಮಾಡುವ ಉದ್ದೇಶದಿಂದ ಗಿರೀಶ್ ಆಳ್ವ ಅವರ ನೇತೃತ್ವದಲ್ಲಿ ಪ್ರಾರಂಭಿಸಿದ ವರಾಹ ಫೌಂಡೇಶನ್ ( ರಿ ) ಇದರ ಉದ್ಘಾಟನಾ ಸಮಾರಂಭ ನಾಳೆ (26-10-2025) ಬೆಳಗ್ಗೆ 9.30 ಕ್ಕೆ ಕುಪ್ಪೆಪದವು ಚರ್ಚ್ ವಠಾರದಲ್ಲಿ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಈ ಪ್ರಯುಕ್ತ ಆರೋಗ್ಯ ತಪಾಸಣೆ ಶಿಬಿರ, ಕಣ್ಣಿನ ತಪಾಸಣೆ ಮತ್ತು ಕನ್ನಡಕ ವಿತರಣೆ, ದಂತ ತಪಾಸಣಾ ಶಿಬಿರ , ಆಧಾರ್ ಕಾರ್ಡ್ ನೊಂದಣಿ ಮತ್ತು ತಿದ್ದುಪಡಿ , ಅಂಚೆ ಜನ ಸಂಪರ್ಕ ಅಭಿಯಾನ , ಗ್ರಾಮದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ, ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮತ್ತು ತಿದ್ದುಪಡಿ, ಪಡಿತರ ಚೀಟಿ ತಿದ್ದುಪಡಿ ಮತ್ತು ಆಯುಷ್ಮಾನ್ ಕಾರ್ಡ್ ನೋಂದಣಿ, ಗೃಹಲಕ್ಷ್ಮಿ ,ಗೃಹ ಜ್ಯೋತಿ ನೋಂದಣಿ ಮತ್ತು ತಿದ್ದುಪಡಿ , ವಿಧವಾ ವೇತನ, ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ,ಮನಸ್ವಿನಿ ಯೋಜನೆಗಳ ನೋಂದಣಿ
ಮುಂತಾದ ಸೇವೆಗಳು ಉಚಿತವಾಗಿ ಲಭ್ಯವಿರಲಿದೆ
ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ – 8105655275, 7259606231, 9945045078, 9880598632 ನಂಬರ್ ಗಳನ್ನು ಸಂಪರ್ಕಿಸಬಹುದು.




























