ಸುಳ್ಯ : ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಜಟ್ಟಿಪಳ್ಳದ ಕಾನತ್ತಿಲದಲ್ಲಿ ಬಾಡಿಗೆ ಮನೆಯೊಂದರಲ್ಲಿದ್ದ ದುಗಲಡ್ಕ ಕೇಶವ ಪೂಜಾರಿ ಎಂಬವರ ಪುತ್ರ ಇಂಜಿನಿಯರಿಂಗ್ ವಿದ್ಯಾರ್ಥಿ ವೀಕ್ಷಿತ್ (19) ಮನೆಯಲ್ಲಿ ಯಾರು ಇಲ್ಲದ ಸಂದರ್ಭ ಪಕ್ಕಾಸಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.
ಆತ್ಮಹತ್ಯೆಗೆ ಕಾರಣ ಇನ್ನಷ್ಟೇ ತಿಳಿಯಬೇಕಿದೆ. ಸುಳ್ಯ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



























