ಮುಂಡೂರು: ಮುಂಡೂರು ಬಿಜೆಪಿ ಗ್ರಾಮ ಸಮಿತಿ ವತಿಯಿಂದ ವಿಶ್ವ ಯೋಗ ದಿನಾಚರಣೆಯನ್ನು ನಡೆಸಲಾಯಿತು.
ಕಾರ್ಯಕ್ರಮವನ್ನು ನರಿಮೊಗರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸುಧಾಕರ ಕುಲಾಲ್ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಯೋಗವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ರೋಗದಿಂದ ಮುಕ್ತವಾಗೋದಕ್ಕೆ ಸಾಧ್ಯ ಎಂದರು. ರಾಷ್ಟ್ರದ ಪ್ರಧಾನಿ ನರೇಂದ್ರ ಮೋದಿ ಯವರು ಯೋಗವನ್ನು ವಿಶ್ವದಲ್ಲಿಯೇ ಗೌರವ ಸಿಗುವ ರೀತಿಯಲ್ಲಿ ನಡೆಸುತ್ತಿದ್ದಾರೆ. ಇವತ್ತು ಯುವ ಜನರು ಯೋಗವನ್ನು ಒಂದು ದಿವಸಕ್ಕೆ ಸೀಮಿತ ಗೊಳಿಸದೇ ಪ್ರತಿ ನಿತ್ಯ ಜೀವನ ದಲ್ಲಿ ಅಳವಡಿಸಿಕೊಳ್ಳಲು ಸಂಕಲ್ಪ ಮಾಡಬೇಕಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಸಮಿತಿ ಅಧ್ಯಕ್ಷ ಶ್ರೀಧರ ನಾಯ್ಕ್ ವಹಿಸಿದ್ದರು. ವೇದಿಕೆಯಲ್ಲಿ ಮರ್ತ್ಯುಂಜೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಬಾಲಚಂದ್ರ ಗೌಡ, ಮಾಜಿ ಅಧ್ಯಕ್ಷ ಅರುಣ್ ಕುಮಾರ್ ಪುತ್ತಿಲ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಪಂಚಾಯತ್ ಸದಸ್ಯ ಅಶೋಕ್ ಪುತ್ತಿಲ, ಬಾಲಕೃಷ್ಣ ಪೂಜಾರಿ, ಶ್ರೀರಾಮ ಗೆಳೆಯರ ಬಳಗದ ಅಧ್ಯಕ್ಷ ಹರೀಶ್ ಬಿಕೆ, ಬಿಜೆಪಿ ಕಾರ್ಯದರ್ಶಿ ಜನಾರ್ಧನ ಪೂಜಾರಿ, ಪ್ರಸಾದ್ ಬಿಕೆ, ಧನಂಜಯ ಕಲ್ಲಮ, ವಿನಯ ಕುಮಾರ್, ದಿನೇಶ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ಅಶೋಕ್ ಕುಮಾರ್ ಪುತ್ತಿಲ ಸ್ವಾಗತಿಸಿ, ಬಾಲಕೃಷ್ಣ ಪೂಜಾರಿ ವಂದಿಸಿದರು.