ವಿಟ್ಲ: ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ಕುಳಾಲು ಮುಂಡಾಜೆ ಕಾನ ಎಂಬಲ್ಲಿ ನಡೆದಿದೆ.
ಮೃತರನ್ನು ದಿನ್ನು @ ದಿನೇಶ್ ಕೆ. ಎಚ್ (36) ಎಂದು ಗುರುತಿಸಲಾಗಿದೆ.
ಕೂಲಿ ಕೆಲಸ ನಿರ್ವಹಿಸುತ್ತಿದ್ದ ದಿನೇಶ್ ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆ. ಮೃತರು ತಾಯಿ ಮತ್ತು ಸಹೋದರನನ್ನು ಅಗಲಿದ್ದಾರೆ.
ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



























