ಪುತ್ತೂರು: ಮಾದಕ ವಸ್ತು ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ಆರೋಪದಲ್ಲಿ ಯುವಕನೋರ್ವನನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ಕೆಮ್ಮಿಂಜೆ ಗ್ರಾಮದ ಮುಕ್ರಂಪಾಡಿಯ ಸಾರ್ವಜನಿಕ ರಸ್ತೆಯ ಬದಿಯಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ಸುಶಾಂತ್ ಜಿ (25ವ) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಸರಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆಗೊಳಪಡಿಸಿದಾಗ ಆತ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ.

























