ಮಂಗಳೂರು: ನಾಳೆಯಿಂದ ಮಂಗಳೂರಿನಲ್ಲಿ ಎಲ್ಲಾ ಅಂಗಡಿ-ಶಾಪ್ ತೆರೆಯಲು ಸರ್ಕಾರ ಅನುಮತಿ ನೀಡಿದೆ ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಇಲ್ಲಿಯ ವ್ಯಾಪಾರಸ್ಥರು ಕಷ್ಟಪಡುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪರಿಗೆ ಮನವಿ ಮಾಡಲಾಗಿತ್ತು. ನಾಳೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಎಲ್ಲಾ ಅಂಗಡಿ ತೆರೆಯಲು ಅನುಮತಿ ಸಿಕ್ಕಿದೆ. ಬೆ.7 ಗಂಟೆಯಿಂದ ಮ.2 ಗಂಟೆಯವರೆಗೆ ಎಲ್ಲಾ ರೀತಿಯ ಅಂಗಡಿ ತೆರೆಯಬಹುದು. ಆದರೆ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಈ ಬಗ್ಗೆ ಇಂದು ಅಧಿಕೃತ ಆದೇಶ ಹೊರಡಿಸಲಿದ್ದಾರೆ ಎಂದರು.
ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಎಲ್ಲಾ ಶಾಸಕರ ಮನವಿ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.