ದಿಲ್ಲಿಯಲ್ಲಿ ನಡೆದ ಘಟನೆಯ ಹಿನ್ನೆಲೆ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳು
- ಜಿಲ್ಲಾದ್ಯಂತ ರಾತ್ರಿ ವೇಳೆ ಪೊಲೀಸ್ ಅಧಿಕಾರಿಗಳು ಕಟ್ಟುನಿಟ್ಟಾದ ಗಸ್ತು ನಿರ್ವಹಿಸುವಂತೆ ಸೂಚಿಸಲಾಗಿದೆ.
- ಸೂಕ್ಷ್ಮ ಪ್ರದೇಶಗಳಲ್ಲಿ ಅಧಿಕಾರಿ/ಸಿಬ್ಬಂದಿಗಳನ್ನು picketing point ಕರ್ತವ್ಯದಲ್ಲಿ ನಿಯೋಜಿಸಿ ನಿಗಾವಹಿಸಲಾಗುತ್ತಿದೆ.
- ಜಿಲ್ಲೆಯ ಮುಖ್ಯ ಸ್ಥಳಗಳಲ್ಲಿ ನಾಕಾಬಂದಿಗಳನ್ನು ಅಳವಡಿಸಿ ಕಟ್ಟುನಿಟ್ಟಾಗಿ ತಪಾಸಣೆ ನಡೆಸಲಾಗುತ್ತಿದೆ.
- ಜಿಲ್ಲೆಯ ಪ್ರವಾಸಿ ತಾಣಗಳು, ಧಾರ್ಮಿಕ ಸ್ಥಳಗಳು, ಮುಖ್ಯ ಸರ್ಕಾರಿ ಕಟ್ಟಡಗಳು ಸೇರಿದಂತೆ ಜನದಟ್ಟಣೆಯ ಇರುವ ಜಾಗಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಿ ನಿಗಾವಹಿಸಲಾಗುತ್ತಿದೆ. ಯಾವುದೇ ಸಂಶಯಾಸ್ಪದ ವ್ಯಕ್ತಿಗಳು ಅಥವಾ ಸಂಶಯಾಸ್ಪದ ಕೃತ್ಯಗಳು ಕಂಡುಬಂದಲ್ಲಿ ಸಾರ್ವಜನಿಕರು ತಕ್ಷಣ ಜಿಲ್ಲಾ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಬೇಕಾಗಿ ವಿನಂತಿಸಲಾಗಿದೆ.


























